944-973-8908 080-22211730 ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ, ಬೆಂಗಳೂರು – 560 002

ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ

ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ

January 30, 2021   0 Comments

ನಿಬಂಧನೆಗಳು:

  • 20 ರಿಂದ 40ರ ವಯೋಮಿತಿಯಲ್ಲಿರುವವರು ಕನ್ನಡ ಕಾವ್ಯ ರಚನೆಯಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸಬಹುದು.
  • ಈಗಾಗಲೇ ಕವನ ಸಂಕಲನಗಳನ್ನು ಪ್ರಕಟಿಸಿರುವವರಿಗೆ ಆದ್ಯತೆ ನೀಡಲಾಗುವುದು.
  •  ಕಾರ್ಯಕ್ರಮವನ್ನು ಕಾಸರಗೋಡಿನಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಸಲಾಗುವುದು.
  •  ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಮೂರು ದಿನಗಳು ಶಿಬಿರದಲ್ಲೇ ವಾಸ್ತವ್ಯ ಮಾಡಬೇಕು.
  • ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲ್ಭಾಗದಲ್ಲಿ ಕಡ್ಡಾಯವಾಗಿ “ಅಖಿಲ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ” ಶಿಬಿರಕ್ಕೆ ಅರ್ಜಿ ಎಂದು ನಮೂದಿಸಿರಬೇಕು.
  •  ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಬಿರದ ಸ್ಥಳಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ / ಸಾಮಾನ್ಯ ರೈಲ್ವೆ ದರವನ್ನು ನೀಡಲಾಗುವುದು. ಹಾಗೂ ಮೂರು ದಿನಗಳು ಉಟೋಪಹಾರ / ವಸತಿ ವ್ಯವಸ್ಥೆಯನ್ನು ಮಾಡಲಾಗುವುದು.
  • ಅಕಾಡೆಮಿ ನಿಯಮಾನುಸಾರ ಆಯ್ಕೆಯಾಗಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಪ್ರಯಾಣಭತ್ಯೆಯನ್ನು ಕಾರ್ಯಕ್ರಮ ಮುಗಿದ ನಂತರ ಬ್ಯಾಂಕ್ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ಪಾವತಿಸಲಾಗುವುದು.
  •  ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‍ಸೈಟ್ ನಿಂದ ಪಡೆದುಕೊಳ್ಳಬಹುದು.
  •  ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು 2021ರ ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org/ ನಲ್ಲಿ ಪ್ರಕಟಿಸಲಾಗುವುದು.
  •  ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2021
  •  ಕಡ್ಡಾಯವಾಗಿ ಅರ್ಜಿಯಲ್ಲಿ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ನಮೂದಿಸಬೇಕು. ಇಲ್ಲದಿದ್ದರೆ ಅರ್ಜಿಯನ್ನು ತಿರಸ್ಕರಿಸಲಾಗುವುದು.
  •  ಅರ್ಜಿಯಲ್ಲಿ ಕೋರಿರುವ ದಾಖಲೆಗಳನ್ನು ಲಗತ್ತಿಸದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಖುದ್ದಾಗಿ / ರಿಜಿಸ್ಟ್ರರ್ ಅಂಚೆ / ಕೊರಿಯರ್ ಮೂಲಕವೇ ಕಳುಹಿಸಬೇಕು. ಇ-ಮೇಲ್ ಮೂಲಕ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ
ರಿಜಿಸ್ಟ್ರಾರ್
ಕರ್ನಾಟಕ ಸಾಹಿತ್ಯ ಅಕಾಡೆಮಿ,
ಎರಡನೇ ಮಹಡಿ, ಕನ್ನಡ ಭವನ,
ಜೆ.ಸಿ.ರಸ್ತೆ, ಬೆಂಗಳೂರು-560 002.
ದೂ: 080-22211730 / 22106460

 

ಅರ್ಜಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: ಅರ್ಜಿ