ಪಿ. ಶ್ರಿನಿವಾಸರಾವ್ ಸ್ಮಾರಕ ಬಹುಮಾನ

ಪಿ. ಶ್ರಿನಿವಾಸರಾವ್ ಸ್ಮಾರಕ ಬಹುಮಾನ

1. ಡಾ. ಸುಮತೀಂದ್ರ ನಾಡಿಗ ಮತ್ತು ಶ್ರೀಮತಿ ಮಾಲತಿ ನಾಡಿಗ ಅವರು ದಿ. ಪಿ. ಶ್ರೀನಿವಾಸರಾವ್ ಅವರ ಹೆಸರಿನಲ್ಲಿ ಅಕಾಡೆಮಿಗೆ ರೂ 50,000 (ಐವತ್ತು ಸಾವಿರಗಳು ಮಾತ್ರ) ಮೊಬಲಗನ್ನು ದತ್ತಿನಿಧಿಯಾಗಿ ನೀಡಿದ್ದಾರೆ.

2. ಈ ಹಣವನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿಯಾಗಿ ಇಟ್ಟು, ಅದರಿಂದ ಬರುವ ಬಡ್ಡಿಯಲ್ಲಿ ರೂ 5,000 ಮೊಬಲಗನ್ನು `ಪುಸ್ತಕ ಬಹುಮಾನ ಯೋಜನೆ’ಯ ನಿಯಮಗಳ ಅನುಸಾರ ಪ್ರತಿವರ್ಷ `ಸಾಹಿತ್ಯ ವಿಮರ್ಶೆ’ ಪ್ರಕಾರದಲ್ಲಿ ಅತ್ಯುತ್ತಮವೆಂದು ನಿರ್ಣಯಿಸಲ್ಪಡುವ ಕೃತಿಗೆ ಬಹುಮಾನವಾಗಿ ನೀಡಲಾಗುವುದು. ಇದು ಪ್ರತ್ಯೇಕ ಬಹುಮಾನವಾಗಿರದೆ `ಪುಸ್ತಕ ಬಹುಮಾನ ಯೋಜನೆ’ ಯಲ್ಲಿಯ 8ನೇ ಸಾಹಿತ್ಯ ಪ್ರಕಾರವಾದ `ಸಾಹಿತ್ಯ ವಿಮರ್ಶೆ’ಯೇ ಆಗಿರುತ್ತದೆ.

3. ಈ ಬಹುಮಾನವನ್ನು `ಪಿ. ಶ್ರೀನಿವಾಸರಾವ್ ಸ್ಮಾರಕ ಬಹುಮಾನ’ ಎಂದು ಕರೆಯಲಾಗುವುದು.